Wednesday, 11th December 2024

975 ಹೊಸ ಕೋವಿಡ್‌ ಪ್ರಕರಣ ಪತ್ತೆ

covid

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 975 ಹೊಸ ಕೋವಿಡ್‌ ಪ್ರಕರಣಗಳು ಮತ್ತು ನಾಲ್ಕು ಸಾವುಗಳು ವರದಿಯಾಗಿವೆ.

ಇದೇ ಅವಧಿಯಲ್ಲಿ 796 ಮಂದಿ ಚೇತರಿಕೆ ಕಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 11,366 ಆಗಿದೆ. ಈ ವರೆಗೆ ಕೋವಿಡ್‌ನಿಂದ 5,21,747 ಮಂದಿ ಮೃತಪಟ್ಟಿದ್ದಾರೆ. ಇನ್ನೊಂದೆಡೆ, ದೆಹಲಿಯಲ್ಲಿ ಕಳೆದೊಂದು ವಾರದಲ್ಲಿ ಮನೆಯಲ್ಲಿ ಕ್ವಾರಂಟೈನ್ ಆಗಿರುವವರ ಸಂಖ್ಯೆ ಶೇಕಡಾ 48ರಷ್ಟಿದೆ ಎಂದು ಸರ್ಕಾರದ ದತ್ತಾಂಶಗಳು ತಿಳಿಸಿವೆ.

ಶುಕ್ರವಾರ ಒಂದೇ ದಿನ 366 ಕೋವಿಡ್ ಪ್ರಕರಣಗಳು ಪತ್ತೆಯಾಗಿ, ಪಾಸಿಟಿವಿಟಿ ದರ ಶೇ.3.95ಕ್ಕೆ ಏರಿತು. ಸೋಂಕಿಗೆ ತುತ್ತಾಗಿ 574 ಮಂದಿ ಮನೆಯಲ್ಲೇ ಪ್ರತ್ಯೇಕವಾಗಿದ್ದುಕೊಂಡು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸರ್ಕಾರ ಹೇಳಿದೆ.