ಲಖನೌ: ಇತ್ತೀಚೆಗೆ ಸರ್ಕಾರದ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಗುಜರಾತ್ ಕೇಡರ್ನ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಪಕ್ಷಕ್ಕಾಗಿ ಕೆಲಸ ಮಾಡುವ ಇಚ್ಛೆ ವ್ಯಕ್ತಪಡಿಸಿರುವ ಶರ್ಮಾ ಶೀಘ್ರದಲ್ಲೇ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ವಕ್ತಾರ ಚಂದ್ರ ಮೋಹನ್ ತಿಳಿಸಿದ್ದಾರೆ. ಉತ್ತರ ಪ್ರದೇಶದ ವಿಧಾನಪರಿಷತ್ನ 12 ಸ್ಥಾನಗಳಿಗೆ ಜನವರಿ 28ರಂದು ನಡೆಯುವ ಚುನಾ ವಣೆಗೆ ಬಿಜೆಪಿಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ. ಜನವರಿ 18ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಚುನಾವಣೆಗೆ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳ ಬಗ್ಗೆ ಕೇಂದ್ರ ನಾಯಕರೇ ಅಂತಿಮಗೊಳಿಸುತ್ತಾರೆ’ ಎಂದು ಹೇಳಿದರು.
ಉತ್ತರ ಪ್ರದೇಶದ ಮಾವು ಜಿಲ್ಲೆಯ 1988 ಬ್ಯಾಚ್ನ ಅಧಿಕಾರಿ ಶರ್ಮಾ, ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರಾಗಿದ್ದಾರೆ. ಜತೆಗೆ ಗುಜರಾತ್ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರೊಂದಿಗೆ ಕೆಲಸ ಮಾಡಿದ್ದಾರೆ.