Thursday, 12th December 2024

ಉತ್ತರಾಖಂಡ ಚುನಾವಣೆ: ಆಪ್ ಅಭ್ಯರ್ಥಿ ಘೋಷಣೆ

ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭಾ ಚುನಾವಣೆ(2022) ಗೆ ಮಾಜಿ ಸೈನಿಕ ಅಜಯ್ ಕೊತಿಯಾಲ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ದೆಹಲಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಘೋಷಿಸಿದ್ದಾರೆ.

ಜನರಿಂದ ಪಡೆದ ಪ್ರತಿಕ್ರಿಯೆಯನ್ನು ಆಧರಿಸಿ ಕೊತಿಯಾಲ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಜನರು ರಾಜ್ಯವನ್ನು ಲೂಟಿ ಮಾಡಿದ ರಾಜಕಾರಣಿಗಳಿಂದ ಮುಕ್ತಿ ಪಡೆಯಲು ಹಾಗೂ ಒಬ್ಬ ಸೇನಾಪತಿಯು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಾರೆ.

ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ಆಮ್ ಆದ್ಮಿ ಪಕ್ಷ, ಕೊತಿಯಾಲ್ ನೇತೃತ್ವದಲ್ಲಿ ಉತ್ತರಾ ಖಂಡವನ್ನು ಹಿಂದೂಗಳಿಗೆ ಜಾಗತಿಕ ಆಧ್ಯಾತ್ಮಿಕ ರಾಜಧಾನಿ ಯನ್ನಾಗಿ ಮಾಡುತ್ತದೆ ಮತ್ತು ರಾಜ್ಯದ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.