Saturday, 14th December 2024

ಅಶಿಸ್ತಿನ ವರ್ತನೆ: ಸಂಸದ ಸಂಜಯ್‌ ಸಿಂಗ್‌ ಅಮಾನತು

ನವದೆಹಲಿ: ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ ಆಪ್‌ನ ರಾಜ್ಯಸಭಾ ಸಂಸದ ಸಂಜಯ್‌ ಸಿಂಗ್‌ ಅವರನ್ನು ಅಮಾನತು ಗೊಳಿಸಲಾಗಿದೆ.

ಸಿಂಗ್‌ ಅವರನ್ನು ಅಮಾನತುಗೊಳಿಸುವ ಪ್ರಸ್ತಾವನೆಯನ್ನು ರಾಜ್ಯಸಭೆ ಬುಧವಾರ ಅಂಗೀಕರಿಸಿದೆ.

ಎಎಪಿ ಸಂಸದ ಸಂಜಯ್ ಸಿಂಗ್ ಅವರು ಘೋಷಣೆಗಳನ್ನು ಕೂಗಿದ, ಕಾಗದಗಳನ್ನು ಹರಿದು ಕುರ್ಚಿಯತ್ತ ಎಸೆದಿದ್ದಕ್ಕಾಗಿ ಪ್ರಸ್ತುತ ವಾರದ ಉಳಿದ ಭಾಗಕ್ಕೆ ರಾಜ್ಯಸಭೆಯಿಂದ ಅಮಾನತುಗೊಂಡಿದ್ದಾರೆ ಎಂದು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಹೇಳಿದ್ದಾರೆ.

ಈ ಹಿಂದೆ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿರೋಧ ಪಕ್ಷದ 19 ಸಂಸದರನ್ನು ಸದನದಿಂದ ಅಮಾನತುಗೊಳಿಸ ಲಾಗಿತ್ತು.