Friday, 25th October 2024

ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್‌

ವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರು ಮೇಯರ್‌ ಆಯ್ಕೆ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ.

ಈ ಮೂಲಕ ಆಮ್‌ ಆದ್ಮಿ ಪಾರ್ಟಿಯ (ಎಎಪಿ) ವಾದವನ್ನು ಪುರಸ್ಕರಿಸಿದೆ. ಎಂಸಿಡಿಯ ಮುಂದಿನ ಸಭೆಯಲ್ಲೇ ಮೇಯರ್‌ ಆಯ್ಕೆಗಾಗಿ ಚುನಾವಣೆ ನಡೆಸಬೇಕು ಮತ್ತು ಮೇಯರ್‌ ಆಯ್ಕೆ ನಡೆದ ಬಳಿಕ ಉಪಮೇಯರ್‌ ಆಯ್ಕೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್‌. ನರಸಿಂಹ ಮತ್ತು ಜೆ.ಬಿ. ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು ನಿರ್ದೇಶನ ನೀಡಿದೆ.

‘ಮೇಯರ್‌ ಚುನಾವಣೆ ಮತ್ತು ಎಂಸಿಡಿಯ ಮುಂದಿನ ಸಭೆಯ ಸಂಬಂಧ 24 ಗಂಟೆಗಳೊಳಗೆ ನೋಟಿಸ್‌ ನೀಡಲಾಗುವುದು’ ಎಂದು ನ್ಯಾಯಪೀಠ ಹೇಳಿದೆ.

ಮೇಯರ್‌ ಚುನಾವಣೆ ಶೀಘ್ರ ನಡೆಸಲು ನಿರ್ದೇಶನ ನೀಡಬೇಕೆಂದು ಕೋರಿ ಎಎಪಿಯ ಮೇಯರ್‌ ಅಭ್ಯರ್ಥಿ ಶೆಲ್ಲಿ ಒಬೆರಾಯ್‌ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.