Wednesday, 11th December 2024

ಎಎಪಿ ಶಾಸಕರ ಖರೀದಿಗೆ ಬಿಜೆಪಿ ಯತ್ನ: ನೋಟಿಸ್ ಜಾರಿ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಯತ್ನಿಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ದಂತೆ ನೋಟಿಸ್ ಜಾರಿ ಮಾಡಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ನೋದೆಹಲಿ ಪೊಲೀಸ್ ಅಪರಾಧ ದಳ ಶನಿವಾರ ಭೇಟಿ ನೀಡಿದೆ.
ದೆಹಲಿ ಪೊಲೀಸ್ ಅಪರಾಧ ದಳ, ಶುಕ್ರವಾರ ಸಂಜೆಯೂ ಕೇಜ್ರಿವಾಲ್ ನಿವಾಸಕ್ಕೆ ಭೇಟಿ ಕೊಟ್ಟಿತ್ತು. ಆದರೆ ಕೇಜ್ರಿವಾಲ್ ನಿವಾಸದ ಅಧಿಕಾರಿಗಳು ಅದನ್ನು ಸ್ವೀಕರಿಸಲು ನಿರಾಕರಿಸಿದ್ದರಿಂದ ನೋಟಿಸ್ ನೀಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ ದೆಹಲಿ ಸಚಿವೆ ಆತಿಶಿ ನಿವಾಸಕ್ಕೂ ಕ್ರೈ ಬ್ರಾಂಚ್ ತಂಡ ಭೇಟಿ ಕೊಟ್ಟಿತ್ತು.

ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸುತ್ತಿರುವ ವಿಚಾರಣೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾ ಲ್ ಐದನೇ ಬಾರಿಯೂ ಗೈರಾಗಿದ್ದಾರೆ.