Friday, 20th September 2024

ದೆಹಲಿ ಮದ್ಯ ನೀತಿ ಪ್ರಕರಣ: ಸಂಸದ ಸಂಜಯ್ ಸಿಂಗ್ ವಿರುದ್ದ ಚಾರ್ಜ್ಶೀಟ್ ಸಲ್ಲಿಕೆ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ, ಸಂಸದ ಸಂಜಯ್ ಸಿಂಗ್ ಮತ್ತು ಇತರ ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯ ಶನಿವಾರ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ 60 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಂಜಯ್ ಸಿಂಗ್ ಅವರನ್ನ ಇಡಿ ಬಂಧಿಸಿತ್ತು. ಈ ವರ್ಷದ ಅಕ್ಟೋಬರಿನಲ್ಲಿ ದೆಹಲಿಯ ಅವರ ನಿವಾಸದಲ್ಲಿ ಒಂಬತ್ತು ಗಂಟೆಗಳ ಶೋಧದ ನಂತರ ಅವರನ್ನ ಬಂಧಿಸಲಾಯಿತು, ಇದು ಎಎಪಿಗೆ ಮತ್ತೊಂದು ಹೊಡೆತವಾಗಿದೆ.

ಮದ್ಯ ನೀತಿ ಹಗರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನ ಈ ವರ್ಷದ ಫೆಬ್ರವರಿಯಲ್ಲಿ ಸಿಬಿಐ ಬಂಧಿಸಿತ್ತು.

ಕಳೆದ ವರ್ಷ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಅರವಿಂದ್ ಕೇಜ್ರಿವಾಲ್ ಅವರ ಆಪ್ತರಾದ ಮೊದಲ ಎಎಪಿ ನಾಯಕ ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್. ಆದಾಗ್ಯೂ, ಅವರು ಪ್ರಸ್ತುತ ವೈದ್ಯಕೀಯ ಜಾಮೀನಿನ ಮೇಲೆ ಹೊರಗಿದ್ದಾರೆ.