ಚಂಡೀಗಡ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಇಂಡಿಯಾ ಜೊತೆ ಯಾವುದೇ ಮೈತ್ರಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.
ಇದರ ಬೆನ್ನಲ್ಲೇ, ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಟಿಎಂಸಿ ಅಂತೆ ಎಎಪಿ ಕೂಡ ಪಂಜಾಬ್ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸೂಚನೆ ನೀಡಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್ನಲ್ಲಿ ಎಲ್ಲಾ 13 ಸ್ಥಾನಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲ್ಲಲಿದೆ ಎಂದು ಮುಖ್ಯ ಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. ನಾವು ಈ ವಿಚಾರದಲ್ಲಿ ಯಾವುದೇ ಒಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಪಂಜಾಬ್ ಎಎಪಿಯ ಪ್ರಸ್ತಾವನೆಯನ್ನು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡ ಒಪ್ಪಿಗೆ ಸೂಚಿಸಿದ್ದಾರೆ.
ಆಮ್ ಆದ್ಮಿ ಪಕ್ಷವೂ ಮಮತಾ ಬ್ಯಾನರ್ಜಿ ಅವರ ಹಾದಿಯಲ್ಲೇ ನಡೆದು ಕಾಂಗ್ರೆಸ್ ತನ್ನ ಹಠಮಾರಿ ಧೋರಣೆ ಖಂಡಿಸಿದೆ. ಶೀಘ್ರದಲ್ಲೇ ಎಎಪಿ ಕೂಡ ಇದನ್ನುಅಧಿಕೃವಾಗಿ ಘೋಷಿಸಲಿದೆ ಎಂದು ಹೇಳಲಾಗುತ್ತಿದೆ.
ಇಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆಯಲ್ಲಿ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮೈತ್ರಿಯನ್ನು ತಿರಸ್ಕರಿಸಿದ ನಂತರ, ಮಮತಾ ಬ್ಯಾನರ್ಜಿ ಅವರ ಮುಖದಲ್ಲಿ ನಿರ್ಲಕ್ಷ್ಯದ ನೋವು ಮತ್ತು ಬೇಸರ ಕಂಡು ಬಂದಿದೆ. ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆ ಪಶ್ಚಿಮ ಬಂಗಾಳಕ್ಕೆ ಬರುವ ಮುನ್ನ ತಮಗೆ ಸೌಜನ್ಯಕ್ಕಾದರೂ ಮಾಹಿತಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.