Sunday, 15th December 2024

ಮನಿ ಲಾಂಡ್ರಿಂಗ್: ಅಭಿಷೇಕ್‌ ಬ್ಯಾನರ್ಜಿ ವಿಚಾರಣೆಗೆ ಹಾಜರು

ನವದೆಹಲಿ; ಪಶ್ಚಿಮ ಬಂಗಾಳ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದ ರಳಿಯ, ತೃಣಮೂಲ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿ ಅವರು ಮತ್ತೊಮ್ಮೆ ಜಾರಿ ನಿರ್ದೇಶನಾಲಯ ಕಚೇರಿಗೆ ಸೋಮವಾರ ಮನಿ ಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದರು.

ಬಿಜೆಪಿ ತನ್ನ ಎಲ್ಲಾ ಶಕ್ತಿಗಳ ಹೊರತಾಗಿಯೂ ಚುನಾವಣಾ ಮತ್ತು ಪ್ರಜಾಸತ್ತಾತ್ಮಕವಾಗಿ ಟಿಎಂಸಿಯನ್ನುಸೋಲಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಕೇಂದ್ರ ಸರ್ಕಾರವು ನಮ್ಮ ವಿರುದ್ಧ ಏಜೆನ್ಸಿಗಳನ್ನು ಬಳಸುತ್ತಿದೆ ಎಂದು ಹೇಳಿದರು.

ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ಇಬ್ಬರೂ ಮಾ.21 ಮತ್ತು 22 ರಂದು ದೆಹಲಿ ಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆ ಎದುರಿಸಲಿದ್ದಾರೆ.

ಬ್ಯಾನರ್ಜಿ ಮತ್ತು ಅವರ ಪತ್ನಿ ಈ ಹಿಂದೆ ದೆಹಲಿಗೆ ಇಡಿ ಸಮನ್ಸ್ ವಿರುದ್ಧ ನ್ಯಾಯಾ ಲಯದ ಮೊರೆ ಹೋಗಿದ್ದರು. ಇಬ್ಬರೂ ಪಶ್ಚಿಮ ಬಂಗಾಳದ ನಿವಾಸಿಗಳಾಗಿರುವು ದರಿಂದ ರಾಷ್ಟ್ರ ರಾಜಧಾನಿಯಲ್ಲಿ ಅವರ ಮುಂದೆ ಹಾಜರಾಗಲು ಸಂಸ್ಥೆಯು ಅವರನ್ನು ಕರೆಯಬಾರದು ಎಂದು ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ಇಡಿ ಅಧಿಕಾರಿಗಳು ಎಂಟು ಗಂಟೆಗಳಿಗೂ ಹೆಚ್ಚು ಕಾಲ ಅಭಿಷೇಕ್ ಬ್ಯಾನರ್ಜಿ ಅವರನ್ನು ಪ್ರಶ್ನಿಸಿದ್ದರು.