ನವದೆಹಲಿ: ಮೂಢನಂಬಿಕೆ, ಪ್ರಚೋದನೆ, ಮಾಟಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ಈ ಬಗ್ಗೆ ಅರ್ಜಿಯನ್ನು ಮಾನ್ಯ ಮಾಡಲು ನಿರಾಕರಿಸಿದ ಸುಪ್ರೀಂಕೋರ್ಟ್, 18 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿಯು ತನ್ನ ಧರ್ಮ ವನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂಬುದಕ್ಕೆ ಯಾವುದೇ ಕಾರಣವಿಲ್ಲ, 18 ವರ್ಷ ದಾಟಿದರೆ ಧರ್ಮ ಆಯ್ಕೆಗೆ ಅವರು ಸ್ವತಂತ್ರರು ಎಂದು ಹೇಳಿದೆ.
ಬಿಜೆಪಿ ಮುಖಂಡರಾದ ಅಶ್ವಿನಿ ಉಪಾಧ್ಯಾಯ ಅವರು ಈ ಅರ್ಜಿ ಸಲ್ಲಿಸಿದ್ದರು. ಧರ್ಮದ ದುರುಪಯೋಗ ತಡೆಯಲು ಸಮಿತಿ ನೇಮಿಸಿ ಮತಾಂತರ ಕಾನೂನು ಜಾರಿಗೆ ತರುವ ಸಾಧ್ಯತೆ ಗಳನ್ನು ಕಂಡುಹಿಡಿಯಲು ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.
ಕಳೆದ ಕೆಲ ವರ್ಷಗಳಿಂದ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಲೇ ಸಾಗಿವೆ. ಎಷ್ಟೋ ಹೆಣ್ಣುಮಕ್ಕಳು ಆಮಿಷಕ್ಕೆ ಬಲಿಯಾಗಿ ಮತಾಂತರಗೊಂಡು ನಂತರ ಚಿತ್ರಹಿಂಸೆ ಪಡುತ್ತಿರುವ, ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ. ಇದೇ ಕಾರಣಕ್ಕೆ ಕೆಲವು ರಾಜ್ಯ ಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಇಂಥದ್ದೊಂದು ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಅಲ್ಲ, ಬದಲಿಗೆ ಪಬ್ಲಿಸಿಟಿಗಾಗಿ ಸಲ್ಲಿಸಿರುವ ಅರ್ಜಿಯಂತಿದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ