Sunday, 13th October 2024

ಎಬಿವಿಪಿ ಅಖಿಲ ಭಾರತ ಪ್ರತಿನಿಧಿಸಭಾ ನಾಳೆ

ಮಲ್ಕ (ಹರ್ಯಾಣ): ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖೀಲ ಭಾರತ ಪ್ರತಿನಿಧಿಸಭಾ, ಭಾನುವಾರ ಹರ್ಯಾಣದ ಸಮಲ್ಕದಲ್ಲಿ ಆರಂಭವಾಗಲಿದೆ.

ಸರಸಂಘಚಾಲಕ ಮೋಹನ್‌ ಭಾಗವತ್‌, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಒಟ್ಟು 1,400 ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಕೂಡ ಪಾಲ್ಗೊಳ್ಳಲಿದ್ದಾರೆ. ಸಂಘದ ಪರಿವಾರ ಸಂಘಟನೆಯ ಆಯ್ದ 34 ನಾಯಕರಿಗೂ ಪಾಲ್ಗೊಳ್ಳಲು ಅವಕಾಶವಿದೆ. ಈ ಸಭೆಯಲ್ಲಿ ದೇಶದಲ್ಲಿ ಸಾಮಾಜಿಕ ಸಾಮರಸ್ಯ ಮೂಡಿಸುವುದು, ಜನರು ತಮ್ಮ ಕರ್ತವ್ಯವನ್ನು ಚೆನ್ನಾಗಿ ನಿರ್ವಹಿಸುವಂತೆ ಪ್ರೇರಿಸುವುದು, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಬಗ್ಗೆ ಚರ್ಚೆ ನಡೆಯಲಿದೆ.