Saturday, 14th December 2024

ಟ್ರ‍್ಯಾಕ್ಟರ್‌ಗೆ ಟ್ರಕ್ ಡಿಕ್ಕಿ: 6 ಜನರ ಸಾವು, 20 ಮಂದಿಗೆ ಗಾಯ

ಜೈಪುರ: ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸುಮೇರ್‌ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ಹೇಳಿದ್ದಾರೆ.

ಯಾತ್ರಾರ್ಥಿಗಳು ಜೈಸಲ್ಮೇರ್‌ನ ರಾಮದೇವ್ರಾದ ಬಾಬಾ ರಾಮ್‌ದೇವ್ ದೇವಾಲಯದಿಂದ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ಅಪಘಾತ ದುಃಖಕರವಾಗಿದೆ. ಈ ದುಃಖತಪ್ತ ಕುಟುಂಬಗಳೊಂದಿಗೆ ನಾವಿದ್ದೇವೆ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.