Saturday, 14th December 2024

ಸಿದ್ಧೌಲಿ: ಟ್ರ್ಯಾಕ್ಟರ್’ಗೆ ಟ್ರಕ್ ಢಿಕ್ಕಿ, 30 ಮಂದಿಗೆ ಗಂಭೀರ ಗಾಯ

ಲಕ್ನೋ: ಲಕ್ನೋ-ದೆಹಲಿ ಹೆದ್ದಾರಿಯ ಸೀತಾಪುರ ಜಿಲ್ಲೆಯ ಸಿದ್ಧೌಲಿ ಪ್ರದೇಶದಲ್ಲಿ 35ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಗೆ ವೇಗವಾಗಿ ಬಂದ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟು, 30 ಮಂದಿ ಗಂಭೀರವಾಗಿ ಗಾಯಗೊಂಡಿ ದ್ದಾರೆ.

ಬಾರಾಬಂಕಿ ಜಿಲ್ಲೆಯ ದೇವಾ ಷರೀಫ್ ದೇಗುಲಕ್ಕೆ ಮಗುವಿನ ಹೆಸರಿನಲ್ಲಿ ಪೂಜೆ ಮಾಡಿ ಸಲು ಕುಟುಂಬ ಸದಸ್ಯರು ಶಹಜಹಾನ್‌ಪುರ ರೌಜಾ ಪ್ರದೇಶದಿಂದ ಟ್ರಾಕ್ಟರ್ ಮೂಲಕ ಗುರುವಾರ ಹೊರಟಿದ್ದಾರೆ. ಈ ವೇಳೆ ಮಳೆ ಸುರಿಯುತ್ತಿದ್ದ ಪರಿಣಾಮ ರಸ್ತೆ ಸರಿಯಾಗಿ ಕಾಣದ ಹಿನ್ನೆಲೆಯಲ್ಲಿ ಚಾಲಕ ಟ್ರ್ಯಾಕ್ಟರ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾನೆ.

ಟ್ರಕ್ ಟ್ರ್ಯಾಕ್ಟರ್ ಟ್ರಾಲಿ ಗೆ ಢಿಕ್ಕಿ ಹೊಡೆದಿದೆ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ಮೂವತ್ತು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಕಿಂಗ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಕ್ರೇನ್ ಮೂಲಕ ವಾಹನಗಳನ್ನು ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.