ಲಖನೌ: ಬುದೌನ್ನ ಸಿವಿಲ್ ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಶೇರಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ.
ಭಕ್ತರು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಬುದೌನ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ.
ರಸ್ತೆ ಅಪಘಾತವು ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದು ಕೊಂಡವರಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ ಎಂದು ಪ್ರಧಾನಿ ಕಾರ್ಯಾ ಲಯ ಟ್ವೀಟ್ ಮಾಡಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಬುಡೌನ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ.