Friday, 13th December 2024

ನೌಶೇರಾ ಬಳಿ ರಸ್ತೆ ಅಪಘಾತ: ಆರು ಮಂದಿ ಸಾವು

ಲಖನೌ: ಬುದೌನ್‌ನ ಸಿವಿಲ್ ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಶೇರಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಆರು ಜನರು  ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ.

ಭಕ್ತರು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಬುದೌನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಂತಾಪ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಬುಡೌನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ.