Thursday, 14th November 2024

ಕೇರಳ ಸಾರಿಗೆ ಬಸ್ ಮರಕ್ಕೆ ಡಿಕ್ಕಿ: ಚಾಲಕನ ಸಾವು, 20 ಮಂದಿಗೆ ಗಾಯ

ಕೊಚ್ಚಿ: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು, ಬಸ್ ಚಾಲಕ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಕೊಚ್ಚಿ ಸಮೀಪ ಸೋಮವಾರ ಬೆಳಿಗ್ಗೆ ಘಟನೆ ಸಂಭವಿಸಿದೆ.

ತಿರುವನಂತಪುರಂನಿಂದ ಕೋಝಿಕೋಡ್ ಗೆ ತೆರಳುತ್ತಿದ್ದ ಸೂಪರ್ ಡೀಲಕ್ಸ್ ಬಸ್ಸು ಕೊಚ್ಚಿ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಚಾಲಕ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿ ದ್ದು ಅದರಲ್ಲಿ ಬಸ್ಸಿನ ನಿರ್ವಾಹಕ ಹಾಗೂ ಇಬ್ಬರು ಪ್ರಯಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.