Friday, 13th December 2024

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ: ಐವರು ಸಾವು

ಫಿರೋಜಾಬಾದ್‌ : ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ಬೆಳಗ್ಗೆ ಟ್ರಕ್‌, ಬಸ್‌ಗೆ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.

ರಾಜಸ್ಥಾನ ಮೂಲದ ಖಾಸಗಿ ಡಬಲ್‌ ಡೆಕ್ಕರ್‌ ಬಸ್‌ ಆಗ್ರಾದಿಂದ ಲಖನೌಗೆ ಹೋಗುತ್ತಿದ್ದಾಗ ಬ್ರೇಕ್‌ ಫೇಲ್‌ ಆಗಿ ರಸ್ತೆ ಪಕ್ಕದಲ್ಲಿ ನಿಂತಿತ್ತು. ಬಸ್‌ ಚಾಲಕ ಹಾಗೂ ನಿರ್ವಾಹಕ ಬ್ರೇಕ್‌ ಸರಿಪಡಿಸು ತ್ತಿದ್ದಾಗ ವೇಗವಾಗಿ ಬಂದ ಟ್ರಕ್‌ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಕೂಡಲೇ ಘಟನಾ ಸ್ಥಳಕ್ಕೆ ತೆರಳಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ನೆರವಾಗು ವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.