ಉತ್ತರ ಪ್ರದೇಶ: ಬಲ್ಲಿಯಾದಲ್ಲಿ ಪಿಕ್ ಅಪ್ ಟ್ರಕ್ ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ ತಿಲಕ ಸಮಾರಂಭದಿಂದ ಸಂತ್ರಸ್ತರು ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ನಾಲ್ವರನ್ನು ಬಿಎಚ್ಯುನ ಆಘಾತ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.