Sunday, 15th December 2024

ಬಾರಾಮುಲ್ಲಾದಲ್ಲಿ ರಸ್ತೆ ಅಪಘಾತ: ಇಬ್ಬರ ಸಾವು

ವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 18 ಮಂದಿ ಗಾಯಗೊಂಡಿದ್ದಾರೆ.

ಜಿಲ್ಲೆಯ ರಫಿಯಾಬಾದ್ ಪ್ರದೇಶದ ಪಜಲ್ಪೊರಾದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಇಬ್ಬರನ್ನು ಅಬ್ದುಲ್ ರಶೀದ್ ಖಾನ್ ಮತ್ತು ನೂರ್ ಮೊಹಮ್ಮದ್ ಜುಂಜು ಎಂದು ಗುರುತಿಸಲಾಗಿದೆ. ಇಬ್ಬರೂ ರಫಿಯಾ ಬಾದ್ ನ ಹಮಾಮ್ ಮರ್ಖೂತ್ ಗೆ ಸೇರಿದವರು. ಇಬ್ಬರೂ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಬಾರಾಮುಲ್ಲಾ ಪಟ್ಟಣದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ (ಜಿಎಂಸಿ) ಸ್ಥಳಾಂತರಿಸಲಾಗಿದೆ.