ನವದೆಹಲಿ: ನಗರದ ದ್ವಾರಕ ಪ್ರದೇಶದಲ್ಲಿ ಶಾಲಾ ಬಾಲಕಿಯ ಮೇಲೆ ಹಾಡಹಲೇ ದುಷ್ಕರ್ಮಿಗಳು ಆಸಿಡ್ ದಾಳಿ ಮಾಡಿದ ದುರಂತ ಘಟನೆ ಬೆಳಕಿಗೆ ಬಂದಿದೆ.
ಬಾಲಕಿಯು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಇಬ್ಬರು ಕಿರಾತಕರು ಬೈಕ್ನಲ್ಲಿ ಬಂದಿದ್ದಾರೆ. ಈ ವೇಳೆ ಹಿಂದೆ ಕುಳಿತಿದ್ದ ಕಿರಾತಕ ಬಾಲಕಿಯ ಮುಖದ ಮೇಳೆ ಆಯಸಿಡ್ ಎರಚಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆಯು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದ್ದು, ತೀವ್ರ ಗಾಯಗೊಂಡ ಆಯಸಿಡ್ ಸಂತ್ರೆಸ್ತೆಯನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.