Wednesday, 11th December 2024

ಮೊದಲ ಬಾರಿಗೆ ಮುಂಬೈನಲ್ಲಿ ಮತ ಚಲಾಯಿಸಿದ ನಟ ಅಕ್ಷಯ್ ಕುಮಾರ್

ಮುಂಬೈ: ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಭಾರತೀಯ ಪೌರತ್ವ ಪಡೆದ ನಂತರ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮುಂಬೈನಲ್ಲಿ ಮತ ಚಲಾಯಿಸಿದರು. ನಟ ಈ ಹಿಂದೆ ಕೆನಡಾದ ಪೌರತ್ವವನ್ನು ಮಾತ್ರ ಹೊಂದಿದ್ದರು.

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ.

ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.