Sunday, 15th December 2024

ತೌಸಂಡ್ಸ್ ಲೈಟ್ಸ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ನಟಿ ಖುಷ್ಬೂ ಸುಂದರ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್  ಗುರುವಾರ ಚೆನ್ನೈನ ತೌಸಂಡ್ಸ್ ಲೈಟ್ಸ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ಜಾನಪದ ಕಲಾತಂಡಗಳೊಂದಿಗೆ ರೋಡ್ ಶೋ ನಡೆಸಿದರು. ಅಭಿಮಾನಿಗಳು, ಪಕ್ಷದ ಮುಖಂಡರು ರೋಡ್ ಶೋ ನಲ್ಲಿ ಪಾಲ್ಗೊಂಡಿದ್ದರು. ಕಳೆದ ವರ್ಷ ಕಾಂಗ್ರೆಸ್ ತ್ಯಜಿಸಿದ್ದ ಖುಷ್ಬೂ ಬಿಜೆಪಿ ಸೇರಿಕೊಂಡಿದ್ದರು.

ಇದೀಗ ಬಿಜೆಪಿಯಿಂದ ಸ್ಪರ್ಧಿಸಿರುವ ಖುಷ್ಬೂ ಡಿಎಂಕೆ ಅಭ್ಯರ್ಥಿ ಡಾ. ಎಳಿಲನ್ ವಿರುದ್ಧ ಕಣಕ್ಕೆ ಇಳಿದಿದ್ದಾರೆ.

ಖುಷ್ಬೂ 2014ರಲ್ಲಿ ಕಾಂಗ್ರೆಸ್ ಸೇರಿಕೊಂಡಿದ್ದರು. ತದ ನಂತರ 2020 ಅಕ್ಟೋಬರ್ ತಿಂಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ, ಇದೀಗ ಆ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily