Sunday, 15th December 2024

ಬಿಜೆಪಿ ಸೇರಲು ಅಣಿಯಾದ ನಟಿ ಖುಸ್ಬೂ

ಚೆನ್ನೈ: ನಟಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ನಾಯಕಿಯಾಗಿದ್ದ ಖುಸ್ಬೂ ಸುಂದರ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ದ್ದಾರೆ. ಅವರು ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ.

ಸೋನಿಯಾ ಗಾಂಧಿ ಗೆ ರಾಜೀನಾಮೆ ಪತ್ರ ರವಾನಿಸಿರುವ ಅವರು ನಾನು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

2014 ರಿಂದ ಅವರು ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಅದಕ್ಕೂ ಮೊದಲು ಖುಸ್ಬೂ ಡಿಎಂಕೆಯಲ್ಲಿದ್ದರು.

ಕಾಂಗ್ರೆಸ್ ತೊರೆದಿರುವ ಖುಸ್ಬೂ ಬಿಜೆಪಿ ಸೇರಲಿದ್ದು, ಅವರು ಬರುವ ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸ ಲಿದ್ದಾರೆ ಎನ್ನಲಾಗಿದೆ. ಇಂದು ದೆಹಲಿಯಲ್ಲಿ ಅವರು ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲಿದ್ದಾರೆ.