Sunday, 15th December 2024

ಶಿವಸೇನೆಗೆ ರಂಗೀಲಾ ಬೆಡಗಿ ಅಧಿಕೃತ ಸೇರ್ಪಡೆ

ಮುಂಬೈ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರಿಯಲ್ಲಿ ಶಿವಸೇನೆ ಸೇರ್ಪಡೆಯಾಗಿದ್ದಾರೆ.

ಉದ್ಧವ್ ಅವರ ಪತ್ನಿ ರಶ್ಮಿ ಠಾಕ್ರೆ ಅವರು ನಟಿಯ ಕೈಗೆ ‘ಶಿವ ಬಂಧನ್’ ಎಂಬ ಎಳೆ ಕಟ್ಟುವ ಮೂಲಕ ಪಕ್ಷಕ್ಕೆ ಬರಮಾಡಿ ಕೊಂಡರು. ಈ ವೇಳೆ ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಮತ್ತು ಇತರ ಹಿರಿಯ ಸೇನಾ ಮುಖಂಡರು ಉಪಸ್ಥಿತರಿದ್ದರು.

ಮಾತೋಂಡ್ಕರ್ ಅವರು ಮಂಗಳವಾರ ಅಧಿಕೃತವಾಗಿ ಶಿವಸೇನೆಗೆ ಸೇರುವ ಮೊದಲು, ನಟಿಯನ್ನು ರಾಜ್ಯಪಾಲರ ಕೋಟಾದಡಿ ವಿಧಾನ ಪರಿಷತ್ (ಎಂಎಲ್‌ಸಿ) ಸದಸ್ಯರಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಲಾಗಿತ್ತು.

ಊರ್ಮಿಳಾ 2019ರ ಲೋಕಸಭಾ ಚುನಾವಣೆಯಲ್ಲಿ ಮುಂಬೈ ದಕ್ಷಿಣ ಕ್ಷೇತ್ರ ದಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಸೋಲು ಅನುಭವಿಸಿ ದ್ದರು. ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಗೋಪಾಲ್​ ಶೆಟ್ಟಿ ಗೆಲುವು ಸಾಧಿಸಿದ್ದರು.