Tuesday, 14th May 2024

ಭಾರತದಲ್ಲಿನ ಅಫ್ಘಾನ್ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ನವದೆಹಲಿ : ಭಾರತದಲ್ಲಿನ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ಅಕ್ಟೋಬರ್ 1 ರಿಂದ ತನ್ನ ಕಾರ್ಯಾಚರಣೆಯನ್ನು ಮುಚ್ಚುವುದಾಗಿ ಘೋಷಿಸಿದೆ.

ಸುಗಮ ಕಾರ್ಯನಿರ್ವಹಣೆಗೆ ಅಗತ್ಯವಾದ ಬೆಂಬಲ ಮತ್ತು ಸಂಪನ್ಮೂಲಗಳ ಕೊರತೆ ಸೇರಿದಂತೆ ಇತರೆ ಸಮಸ್ಯೆಗಳಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಬೇಕಾಯಿತು ಎಂದು ತಿಳಿಸಿದೆ.

ಅಧಿಕೃತ ಹೇಳಿಕೆಯಲ್ಲಿ ವಿಷಾದ ವ್ಯಕ್ತಪಡಿಸಿ, “ನವದೆಹಲಿಯಲ್ಲಿರುವ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ತನ್ನ ಕಾರ್ಯಾಚರಣೆ ನಿಲ್ಲಿಸುವ ನಿರ್ಧಾರವನ್ನು ಪ್ರಕಟಿಸಲು ತೀವ್ರವಾದ ದುಃಖ ಮತ್ತು ನಿರಾಶೆಯಾಗಿದೆ. ಅಫ್ಘಾನಿಸ್ತಾನ ಮತ್ತು ಭಾರತದ ನಡುವಿನ ಐತಿಹಾಸಿಕ ಬಾಂಧವ್ಯ ಮತ್ತು ದೀರ್ಘಕಾಲದ ಸಹಭಾಗಿತ್ವವನ್ನು ಗಣನೆಗೆ ತೆಗೆದುಕೊಳ್ಳ ಲಾಗಿದ್ದು, ಮುಂದಿನ ಸಮಸ್ಯೆಗಳನ್ನು ಪರಿಗಣಿಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳ ಲಾಗಿದೆ.

ಕಳೆದ 22 ವರ್ಷಗಳಲ್ಲಿ ಅಫ್ಘಾನಿಸ್ತಾನಕ್ಕೆ ನೀಡಿದ ಬೆಂಬಲಕ್ಕಾಗಿ ಅಫ್ಘಾನಿಸ್ತಾನದ ರಾಯಭಾರಿ ಮತ್ತು ರಾಜತಾಂತ್ರಿಕರು ಭಾರತ ಹಾಗೂ ಭಾರತ ಸರ್ಕಾರಕ್ಕೆ ತಮ್ಮ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತಾರೆ” ಎಂದು ತಿಳಿಸಿದೆ.

ಇಲ್ಲಿಯವರೆಗೆ ರಾಯಭಾರಿ ಕಚೇರಿಯ ಕೆಲಸವನ್ನು ಮಾಜಿ ಅಧ್ಯಕ್ಷ ಅಶ್ರಫ್ ಘನಿ ಅವರ ಅವಧಿಯಲ್ಲಿ ನೇಮಕಗೊಂಡ ರಾಯಭಾರಿ ಫರೀದ್ ಮಾಮುಂಜಾಯ್ ನೋಡಿಕೊಳ್ಳುತ್ತಿದ್ದರು. ಆದರೆ, ಕಳೆದ ಮೂರು ತಿಂಗಳಿಂದ ಅವರ ಕುರುಹುಗಳೇ ಇರಲಿಲ್ಲ. ಬಳಿಕ ಅವರು ಲಂಡನ್‌ನಲ್ಲಿದ್ದಾರೆ ಎಂದು ಹೇಳಲಾಗಿತ್ತು.

Leave a Reply

Your email address will not be published. Required fields are marked *

error: Content is protected !!