Wednesday, 11th December 2024

ಹೈದರಾಬಾದ್‌’ನಲ್ಲಿ ಅಗ್ನಿಪಥ್ ಕಾವು: ರೈಲಿಗೆ ಬೆಂಕಿ, ಕಲ್ಲು ತೂರಾಟ

ಹೈದರಾಬಾದ್: ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿ ರುವ ಪ್ರತಿಭಟನೆಯ ಭಾಗವಾಗಿ ಯುವಕರು ಶುಕ್ರ ವಾರ ಹೈದರಾಬಾದ್‌ ಸಿಕಂದರಾಬಾದ್ ರೈಲು ನಿಲ್ದಾಣವನ್ನು ಪ್ರವೇಶಿಸಿ ರೈಲಿಗೆ ಬೆಂಕಿ ಹಚ್ಚಿದ್ದಾರೆ.

ತಮ್ಮ ನೋಂದಣಿಯ ಬಗ್ಗೆ ‘ನಮಗೆ ನ್ಯಾಯ ಬೇಕು’ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಯೋಜನೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಅಷ್ಟೇ ಅಲ್ಲದೇ, ಸಿಕಂದರಾಬಾದ್ ರೈಲು ನಿಲ್ದಾಣದ ಬಳಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಅಂಗಡಿಗಳು ಮತ್ತು ಸ್ಟಾಲ್‌ಗಳನ್ನು ಧ್ವಂಸ ಗೊಳಿಸಿದ್ದಾರೆ. ಇದರಿಂದ ಭಯಭೀತರಾದ ಪ್ರಯಾಣಿಕರು ನಿಲ್ದಾಣದಿಂದ ಹೊರಗೆ ಓಡಿಹೋಗಿದ್ದಾರೆ. ಘಟನೆ ಬಗ್ಗೆ ತಿಳಿಯು ತ್ತಿದ್ದಂತೆ ಎಲ್ಲಾ ರೈಲುಗಳನ್ನು ಪ್ರಯಾಣಿಸದಂತೆ ನಿಲ್ಲಿಸಲು ಅಧಿಕಾರಿಗಳು ಸೂಚಿಸಿದ್ದಾರೆ.

ಮಾಹಿತಿ ಪಡೆದ ರೈಲ್ವೇ ಪೊಲೀಸರು ಹಾಗೂ ಕಾನೂನು ಸುವ್ಯವಸ್ಥೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.