Thursday, 19th September 2024

ದೆಹಲಿ ಹೈಕೋರ್ಟ್ ಗೆ ಅಗ್ನಿಪಥ್ ಅರ್ಜಿ ವಿಚಾರಣೆ ಹೊಣೆ

ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಪ್ರಶ್ನಿಸಿ ಸಲ್ಲಿಕೆಯಾಗಿ ರುವ ವಿವಿಧ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ದೆಹಲಿ ಹೈಕೋರ್ಟ್ ಗೆ ವರ್ಗಾಯಿಸಿದೆ. ಈ ಕುರಿತ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಗೆ ವರ್ಗಾಯಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದೆ.

ಮಂಗಳವಾರ ವಿಚಾರಣೆ ಕೈಗೆತ್ತಿಕೊಂಡ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅಗ್ನಿ ಪಥ್ ಯೋಜನೆ ಪ್ರಶ್ನಿಸಿ ಯಾವ್ಯಾವ ಹೈಕೋರ್ಟ್ ಗಳಲ್ಲಿ ಎಷ್ಟು ಅರ್ಜಿಗಳು ಸಲ್ಲಿಕೆ ಯಾಗಿವೆ ಎಂಬುದನ್ನು ದಾಖಲಿಸಿದರು. ಕೇರಳ, ಪಾಟ್ನಾ, ದೆಹಲಿ, ಪಂಜಾಬ್, ಹರ್ಯಾಣ, ಉತ್ತರಾಖಂಡ್, ಕೊಚ್ಚಿಯ ಸಶಸ್ತ್ರ ನ್ಯಾಯಮಂಡಳಿಗಳಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ.

ಎಲ್ಲಾ ಉಳಿಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಒಗ್ಗೂಡಿಸಿ ತ್ವರಿತ ವಿಚಾರಣೆ ನಡೆಸುವಂತೆ ದೆಹಲಿ ಹೈಕೋರ್ಟ್ ಗೆ ವರ್ಗಾಯಿಸಿತು.

ಸಂವಿಧಾನದ 226ನೇ ವಿಧಿಯಡಿ ಹೈಕೋರ್ಟ್ ನ ನ್ಯಾಯವ್ಯಾಪ್ತಿಯ ಮಹತ್ವವನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ ಎಂದ ನ್ಯಾ.ಚಂದ್ರಚೂಡ್, ಹೈಕೋರ್ಟ್ ನ ದೃಷ್ಟಿಕೋನ ವನ್ನು ಪಡೆಯುವುದು ಉತ್ತಮ ಎಂದರು.

ಅಗ್ನಿವೀರ್ ಯೋಜನೆಗೆ ಜಾತಿ ಮತ್ತು ಧರ್ಮದ ಪ್ರಮಾಣಪತ್ರಗಳನ್ನು ಕೇಳಲಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿ ಯಾಗಿ, ಹಲವಾರು ಸಶಸ್ತ್ರ ಪಡೆಗಳ ಅಧಿಕಾರಿಗಳು, ಆಕಾಂಕ್ಷಿಗಳು ಜಾತಿ ಪ್ರಮಾಣ ಪತ್ರ ಮತ್ತು ಅಗತ್ಯವಿದ್ದಲ್ಲಿ ಧರ್ಮ ಪ್ರಮಾಣ ಪತ್ರ ಸಲ್ಲಿಸಬೇಕು. ತರಬೇತಿ ವೇಳೆ ಮೃತಪಡುವ ಸೈನಿಕರು ಮತ್ತು ಸೈನಿಕರಿಗೆ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ಅಂತಿಮ ಸಂಸ್ಕಾರ ಮಾಡಲು ಧರ್ಮ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.