Thursday, 12th December 2024

ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ: ಮಕ್ಕಳು ಸಜೀವ ದಹನ

ಗ್ರಾ : ಉತ್ತರಪ್ರದೇಶದ ಆಗ್ರಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಆಸ್ಪತ್ರೆಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ಮಾಲಕ ಸೇರಿ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದಾರೆ.

ಕಟ್ಟಡದ ಮಾಲಕ ವೈದ್ಯ ಹಾಗೂ ಇಬ್ಬರು ಮಕ್ಕಳು ಕಟ್ಟಡದ ಮೇಲಿನ ಅಂತಸ್ತಿನಲ್ಲಿ ಮಲಗಿದ್ದರು ಎನ್ನಲಾಗಿದೆ.

ಈ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿದೆ, ಬೆಂಕಿಯ ಕೆನ್ನಾಲಿಗೆ ಮೇಲೆ ವ್ಯಾಪಿಸುತ್ತಿದ್ದಂತೆ ಮೇಲಿನ ಅಂತಸ್ತಿನಲ್ಲಿ ಮಲಗಿದ್ದ ಮೂವರು ಹೊರಗೆ ಬರಲಾಗದೆ ಉಸಿರುಗಟ್ಟಿ ಮೃತಪಟ್ಟಿದ್ದರು.

ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ ಎನ್ನಲಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಟ್ಟಡ ವೈದ್ಯರ ಒಡೆತನದಲ್ಲಿತ್ತು ಎನ್ನಲಾಗಿದೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.