Wednesday, 11th December 2024

ಟೆಂಪೋ – ಕಾರು ಅಪಘಾತ: ಆರು ಮಂದಿ ಸಾವು

ಆಗ್ರಾ: ಆಗ್ರಾ ಜಿಲ್ಲೆಯ ಖೇರಗಢ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ಸೈಯಾನ್​- ಖೇರಗಢ ರಸ್ತೆಯಲ್ಲಿ ಟೆಂಪೋ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿತು.

ಟೆಂಪೋದಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಾರು ಚಾಲಕ ಪರಾರಿಯಾಗಿದ್ದು ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ 11.30ರ ಸುಮಾರಿಗೆ ಹತ್ತು ಮಂದಿ ಇದ್ದ ಟೆಂಪೋ ಸೈಯಾನ್​ನಿಂದ ಖೇರಗಡಕ್ಕೆ ಹೋಗುತ್ತಿತ್ತು. ಈ ವೇಳೆ ಕಾರು ಟೆಂಪೋಗೆ ಡಿಕ್ಕಿ ಹೊಡೆದಿದೆ.

ಖೇರಗಢ ಪೊಲೀಸ್ ಠಾಣೆ ವ್ಯಾಪ್ತಿಯ ನಾಗಲಾ ಉದಯ ಗ್ರಾಮದ ನಿವಾಸಿ ಟೆಂಪೋ ಸವಾರ ಜಯಪ್ರಕಾಶ್, ಪತ್ನಿ ಬ್ರಜೇಶ್ದೇವಿ, 12 ವರ್ಷದ ಮಗ ಸುಮಿತ್ ಹಾಗು ವೃದ್ಧ ಬ್ರಜ್ ಮೋಹನ್ ಶರ್ಮಾ, ಟೆಂಪೋ ಚಾಲಕ ಭೋಲಾ ನಿವಾಸಿ ಅಯೆಲಾ ಮತ್ತು ಖೇರಗಢದ ಮನೋಜ್ (30) ಎಂಬವರು ಸಾವನ್ನಪ್ಪಿದ್ದಾರೆ. ಇನ್ನುಳಿದ ನಾಲ್ವರು ಗಾಯಾಳುಗಳಿಗೆ ಎಸ್‌.ಎನ್. ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಖೇರಗಢ ಎಸಿಪಿ ಮಹೇಶ್ ಕುಮಾರ್ ಮಾಹಿತಿ ನೀಡಿದರು.

ಚಾಲಕ ಬಂಟಿ ಪಾನಮತ್ತನಾದ್ದರಿಂದ ಘಟನೆ ಸಂಭವಿಸಿದೆ. ಪಿಂಕು ಮತ್ತು ಬನಿಯಾ ಎಂಬಿಬ್ಬರನ್ನು ಬಂಧಿಸಲಾಗಿದೆ. ಕಾರು ಚಾಲಕನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.