Wednesday, 11th December 2024

ಐಸಿಯುನಲ್ಲಿ ’ಕೈ’ ನಾಯಕ ಅಹ್ಮದ್ ಪಟೇಲ್

ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು.

ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ಕಾಂಗ್ರೆಸ್ ಮುಂಖಡ ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುರ್ಗಾಂವ್ ನ ಮೇದಂಟಾ ಆಸ್ಪತ್ರೆಗೆ ದಾಖಲಾಸಿ, ತೀವ್ರ ನಿಗಾ ಘಟಕಕ್ಕೆ (ಐಸಿಯು) ನಲ್ಲಿ ಚಿಕಿತ್ಸೆ ನೀಡುತ್ತಿರುವುದಾಗಿ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

ಪುತ್ರ ಫೈಸಲ್ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾ ಗಿರುವ ತಂದೆ ಯವರ ಆರೋಗ್ಯ ಸ್ಥಿತಿ ಗಂಭೀರಗೊಂಡಿದೆ. ಹೆಚ್ಚಿನ ಚಿಕಿತ್ಸೆಗಾಗಿ ಗುರ್ಗಾಂವ್ ನ ಮೇದಂಟಾ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಶೀಘ್ರ ಗುಣಮುಖರಾಗಲಿ ಎಂಬುದಾಗಿ ನಾವು ನೀವೆಲ್ಲಾ ಪ್ರಾರ್ಥಿಸೋಣ ಎಂದಿದ್ದಾರೆ.

ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರಿಗೆ ಅಕ್ಟೋಬರ್ 1ರಂದು ಕೊರೋನಾ ಸೋಂಕು ತಗುಲಿತ್ತು. ಹೀಗಾಗಿ ತಾವು ಸೋಂಕಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಇಂತಹ ಹಿರಿಯ ಕಾಂಗ್ರೆಸ್ ಮುಖಂಡ ಇದೀಗ ಆರೋಗ್ಯ ಸ್ಥಿತಿ ಗಂಭೀರತೆ ಯನ್ನು ತಲುಪಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.