ನವದೆಹಲಿ : ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಅವರು ಬುಧವಾರ ಬೆಳಿಗ್ಗೆ ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ನಿಧನರಾದರು.
ಒಂದೂವರೆ ತಿಂಗಳ ಹಿಂದೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಅ.1ರಂದು ಫರೀದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುಗ್ರಾಮದ ಮೇದಂತಾ ಮೆಡಿಸಿಟಿಗೆ ಸ್ಥಳಾಂತರಿಸಲಾಗಿತ್ತು.
ಇಂದು ಬೆಳಿಗ್ಗೆ 3.30ಕ್ಕೆ ಕೊನೆಯುಸಿರೆಳೆದರು ಎಂದು ಪುತ್ರ ಫೈಸಲ್ ಪಟೇಲ್ ಟ್ವಿಟರ್ ನಲ್ಲಿ ಹೇಳಿಕೆ ನೀಡಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತು’ ಎಂದು ಅವರು ಹೇಳಿದರು.
ರಾಜಕೀಯ ವಲಯದಲ್ಲಿ ‘ಅಹ್ಮದ್ ಭಾಯಿ’ ಅಥವಾ ‘ಆಪ್’ ಎಂದೇ ಜನಪ್ರಿಯರಾಗಿದ್ದ ಪಟೇಲ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪ್ರಬಲ ರಾಜಕೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.