Wednesday, 11th December 2024

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅ.17ರಂದು ಚುನಾವಣೆ

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕ್ಟೋಬರ್ 17ರಂದು ಚುನಾವಣೆ ನಡೆಯುತ್ತಿದೆ.

ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವ ಶಶಿ ತರೂರ್ ಇದ್ದು, ಖರ್ಗೆಯವರ ಆಯ್ಕೆ ಬಹುತೇಕ ಖಚಿತ ಎಂದು ಹೇಳ ಲಾಗುತ್ತಿದೆ.

ಒಟ್ಟು 494 ಮಂದಿ ತಮ್ಮ ಮತ ಚಲಾಯಿಸಲಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ರುವ ಕೆಪಿಸಿಸಿ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, 479 ಪಿಸಿಸಿ ಪ್ರತಿನಿಧಿಗಳು, 15 ಶಾಸಕಾಂಗ ಪಕ್ಷದ ಸದಸ್ಯರು ಮತದಾನ ಮಾಡಲಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಎಲ್ಲ ಶಾಸಕರು, ರಾಜ್ಯಸಭೆ ಹಾಗೂ ಲೋಕಸಭಾ ಸದಸ್ಯರು ಅ.16ರ ಭಾನುವಾರ ಸಂಜೆ ಒಳಗಾಗಿ ಬೆಂಗಳೂರಿಗೆ ಆಗಮಿಸುವಂತೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.