AIIMS ಬಿಲಾಸ್‌ಪುರವು 18 ಸ್ಪೆಷಾಲಿಟಿ ಮತ್ತು 17 ಸೂಪರ್ ಸ್ಪೆಷಾಲಿಟಿ ವಿಭಾಗಗಳು, 18 ಮಾಡ್ಯುಲರ್ ಆಪರೇಷನ್ ಥಿಯೇಟರ್ ಗಳು ಮತ್ತು 64 ICU ಹಾಸಿಗೆಗಳೊಂದಿಗೆ 750 ಹಾಸಿಗೆಗಳನ್ನು ಹೊಂದಿರುವ ಅತ್ಯಾಧುನಿಕ ಆಸ್ಪತ್ರೆಯಾಗಿದ್ದು, ಇದನ್ನು 1,470 ಕೋಟಿ ರೂಪಾಯಿಗಳಿಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಿಸ ಲಾಗಿದೆ.
247 ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಈ ಆಸ್ಪತ್ರೆಯು 24 ಗಂಟೆಗಳ ತುರ್ತು ಮತ್ತು ಡಯಾಲಿಸಿಸ್ ಸೌಲಭ್ಯಗಳು, ಅಲ್ಟ್ರಾ ಸೋನೋಗ್ರಫಿ, CT ಸ್ಕ್ಯಾನ್, MRI ಇತ್ಯಾದಿ ಆಧುನಿಕ ರೋಗನಿರ್ಣಯ ಯಂತ್ರಗಳು, ಅಮೃತ್ ಫಾರ್ಮಸಿ ಮತ್ತು ಜನೌಷಧಿ ಕೇಂದ್ರ ಮತ್ತು 30 ಹಾಸಿಗೆಗಳ ಆಯುಷ್ ಬ್ಲಾಕ್ ಅನ್ನು ಹೊಂದಿದೆ.
ಹಿಮಾಚಲ ಪ್ರದೇಶದ ಬುಡಕಟ್ಟು ಮತ್ತು ಪ್ರವೇಶಿಸಲಾಗದ ಬುಡಕಟ್ಟು ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸಲು ಆಸ್ಪತ್ರೆಯು ಡಿಜಿಟಲ್ ಆರೋಗ್ಯ ಕೇಂದ್ರವನ್ನು ಸ್ಥಾಪಿಸಿದೆ. ಅಲ್ಲದೆ, ಪ್ರವೇಶಿಸಲಾಗದ ಬುಡಕಟ್ಟು ಮತ್ತು ಎತ್ತರದ ಹಿಮಾಲಯ ಪ್ರದೇಶಗಳಲ್ಲಿ ಕಾಜಾ, ಸಲೂನಿ ಮತ್ತು ಕೀಲಾಂಗ್‌ನಲ್ಲಿ ಆರೋಗ್ಯ ಶಿಬಿರಗಳ ಮೂಲಕ ವಿಶೇಷ ಆರೋಗ್ಯ ಸೇವೆಗಳನ್ನು ಆಸ್ಪತ್ರೆ ಒದಗಿಸುತ್ತದೆ.
ಇದು ಪ್ರತಿ ವರ್ಷ 100 ವಿದ್ಯಾರ್ಥಿಗಳು ಎಂಬಿಬಿಎಸ್ ಕೋರ್ಸ್‌ಗಳಿಗೆ ಮತ್ತು 60 ವಿದ್ಯಾರ್ಥಿಗಳಿಗೆ ನರ್ಸಿಂಗ್ ಕೋರ್ಸ್‌ಗಳಿಗೆ ಪ್ರವೇಶ ನೀಡುತ್ತದೆ.