Friday, 13th December 2024

ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಉದ್ಘಾಟನೆ

ಬಿಲಾಸ್ಪುರ್: ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಯನ್ನು ಉದ್ಘಾಟಿಸಿದರು.

ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಈ ವೇಳೆ ಉಪಸ್ಥಿತರಿದ್ದರು.

AIIMS ಬಿಲಾಸ್‌ಪುರವು 18 ಸ್ಪೆಷಾಲಿಟಿ ಮತ್ತು 17 ಸೂಪರ್ ಸ್ಪೆಷಾಲಿಟಿ ವಿಭಾಗಗಳು, 18 ಮಾಡ್ಯುಲರ್ ಆಪರೇಷನ್ ಥಿಯೇಟರ್‌ ಗಳು ಮತ್ತು 64 ICU ಹಾಸಿಗೆಗಳೊಂದಿಗೆ 750 ಹಾಸಿಗೆಗಳನ್ನು ಹೊಂದಿರುವ ಅತ್ಯಾಧುನಿಕ ಆಸ್ಪತ್ರೆಯಾಗಿದ್ದು, ಇದನ್ನು 1,470 ಕೋಟಿ ರೂಪಾಯಿಗಳಿಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಿಸ ಲಾಗಿದೆ.

ಹಿಮಾಚಲ ಪ್ರದೇಶದ ಬುಡಕಟ್ಟು ಮತ್ತು ಪ್ರವೇಶಿಸಲಾಗದ ಬುಡಕಟ್ಟು ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸಲು ಆಸ್ಪತ್ರೆಯು ಡಿಜಿಟಲ್ ಆರೋಗ್ಯ ಕೇಂದ್ರವನ್ನು ಸ್ಥಾಪಿಸಿದೆ. ಅಲ್ಲದೆ, ಪ್ರವೇಶಿಸಲಾಗದ ಬುಡಕಟ್ಟು ಮತ್ತು ಎತ್ತರದ ಹಿಮಾಲಯ ಪ್ರದೇಶಗಳಲ್ಲಿ ಕಾಜಾ, ಸಲೂನಿ ಮತ್ತು ಕೀಲಾಂಗ್‌ನಲ್ಲಿ ಆರೋಗ್ಯ ಶಿಬಿರಗಳ ಮೂಲಕ ವಿಶೇಷ ಆರೋಗ್ಯ ಸೇವೆಗಳನ್ನು ಆಸ್ಪತ್ರೆ ಒದಗಿಸುತ್ತದೆ.

ಇದು ಪ್ರತಿ ವರ್ಷ 100 ವಿದ್ಯಾರ್ಥಿಗಳು ಎಂಬಿಬಿಎಸ್ ಕೋರ್ಸ್‌ಗಳಿಗೆ ಮತ್ತು 60 ವಿದ್ಯಾರ್ಥಿಗಳಿಗೆ ನರ್ಸಿಂಗ್ ಕೋರ್ಸ್‌ಗಳಿಗೆ ಪ್ರವೇಶ ನೀಡುತ್ತದೆ.