ನವದೆಹಲಿ: ನಿಯಮಗಳನ್ನು ಸರಿಯಾಗಿ ಪಾಲಿಸದ ಏರ್ ಇಂಡಿಯಾಗೆ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) 10 ಲಕ್ಷ ರೂ. ದಂಡದ ಬರೆ ಹಾಕಿದೆ.
ಇದಕ್ಕೂ ಮುನ್ನ ನ.3ರಂದು ವಿಮಾನಯಾನ ನಿಯಂತ್ರಕರು ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ನೀಡಿದ್ದರು.
“ದೆಹಲಿ, ಕೊಚ್ಚಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿನ ಏರ್ ಇಂಡಿಯಾ ಘಟಕಗಳನ್ನು ಪರಿಶೀಲಿಸಿದ ನಂತರ ವಿಮಾನ ಯಾನ ಸಂಸ್ಥೆಯು ನಾಗರಿಕ ವಿಮಾನಯಾನ ನಿಬಂಧನೆಗಳನ್ನು (ಸಿಎಆರ್) ಸರಿಯಾಗಿ ಅನುಸರಿಸುತ್ತಿಲ್ಲ ಎಂದು ಕಂಡುಬಂದಿದೆ” ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ನ.3ರಂದು ನಿಯಂತ್ರಕರಿಂದ ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.
ನೋಟಿಸ್‌ಗೆ ಏರ್ ಇಂಡಿಯಾದಿಂದ ಬಂದ ಪ್ರತಿಕ್ರಿಯೆ ಆಧರಿಸಿ ಪ್ರಯಾಣಿಕರಿಗೆ ಸೌಲಭ್ಯಗಳನ್ನು ಒದಗಿಸುವ ಮಾನದಂಡಗಳಿಗೆ ಸಂಬಂಧಿಸಿದ ಸಿಎಆರ್ ಅನ್ನು ಅದು ಅನುಸರಿಸುತ್ತಿಲ್ಲ ಎಂದು ಗೊತ್ತಾಗಿದೆ. ಈ ನಿಟ್ಟಿನಲ್ಲಿ ವಿಮಾನಯಾನ ಸಂಸ್ಥೆಗೆ ದಂಡ ಹಾಕಲಾಗಿದೆ ಎಂದು ಡಿಜಿಸಿಎ ಹೇಳಿದೆ.