Friday, 20th September 2024

ನ.10ರವರೆಗೆ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳ ಮುಚ್ಚುಗಡೆ

ವದೆಹಲಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ನಗರದ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ನ.10ರವರೆಗೆ ಮುಚ್ಚಲಾಗುವುದು ಎಂದು ದೆಹಲಿ ಶಿಕ್ಷಣ ಸಚಿವ ಅತಿಶಿ ತಿಳಿಸಿದ್ದಾರೆ.

ಮಾಲಿನ್ಯದ ಮಟ್ಟ ಹೆಚ್ಚಾಗಿರುವುದರಿಂದ ದೆಹಲಿಯ ಪ್ರಾಥಮಿಕ ಶಾಲೆಗಳು ನವೆಂಬರ್ 10 ರವರೆಗೆ ಮುಚ್ಚಲ್ಪಡುತ್ತವೆ. 6 ರಿಂದ 12ನೇ ತರಗತಿಗಳಿಗೆ ಆನ್‍ಲೈನ್ ಪಾಠ ನಡೆಸಲಾಗುವುದು ಎಂದು ಹೇಳಿದ್ದಾರೆ.

ಶನಿವಾರ ಸಂಜೆ 4 ಗಂಟೆಗೆ 415 ಇದ್ದ ವಾಯು ಗುಣಮಟ್ಟ ಸೂಚ್ಯಂಕ ಭಾನುವಾರ ಬೆಳಗ್ಗೆ 7 ಗಂಟೆಗೆ 460ಕ್ಕೆ ಕುಸಿದಿದೆ.

ಮಾಲಿನ್ಯದ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳನ್ನು ನವೆಂಬರ್ 3 ಮತ್ತು ನವೆಂಬರ್ 4ರಂದು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಘೋಷಿಸಿದ್ದರು.

ಕೇಂದ್ರದ ವಾಯುಮಾಲಿನ್ಯ ನಿಯಂತ್ರಣ ಯೋಜನೆಯಡಿ, ಮಾಲಿನ್ಯಕಾರಕ ಟ್ರಕ್‍ಗಳು, ವಾಣಿಜ್ಯ ನಾಲ್ಕು-ಚಕ್ರ ವಾಹನಗಳು ಮತ್ತು ಎಲ್ಲಾ ರೀತಿಯ ನಿರ್ಮಾಣಗಳ ನಿಷೇಧ ಸೇರಿದಂತೆ ಎಲ್ಲಾ ತುರ್ತು ಕ್ರಮಗಳನ್ನು ಜಾರಿಗೊಳಿಸಲು ಕಡ್ಡಾಯವಾಗಿದೆ.