ನೆರೆ ರಾಷ್ಟ್ರ ಚೀನಾ ಅರುಣಾಚಲ ಪ್ರದೇಶದ ಮೇಲೆ ಸದಾ ಒಂದು ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಈ ವಿಮಾನ ನಿಲ್ದಾಣವು ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ. ಜೊತೆಗೆ ಈ ಪ್ರದೇಶದಲ್ಲಿ ವ್ಯಾಪಾರ ಮತ್ತು ಪ್ರವಾಸೋದ್ಯ ಮದ ಬೆಳವಣಿಗೆಗೆಗೂ ಸಾಕಷ್ಟು ಕೊಡುಗೆ ನೀಡಲಿದೆ.
690 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಈ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸ ಲಾಗಿದೆ. ಇದು 2,300 ಮೀ ಉದ್ದದ ರನ್ ವೇ ಅನ್ನು ಹೊಂದಿದೆ ಮತ್ತು ಸರ್ಕಾರದ ಹೇಳಿಕೆಯ ಪ್ರಕಾರ ಎಲ್ಲಾ ಹವಾಮಾನದ ದಿನದ ಕಾರ್ಯಾಚರಣೆಗಳಿಗೆ ಸೂಕ್ತ ವಾಗಿರುತ್ತದೆ.
ವಿಮಾನ ನಿಲ್ದಾಣದ ಹೆಸರು ಅರುಣಾಚಲ ಪ್ರದೇಶದ ಸಂಪ್ರದಾಯಗಳು ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ರಾಜ್ಯದಲ್ಲಿ ಸೂರ್ಯ (‘ದೋನಿ’) ಮತ್ತು ಚಂದ್ರ (‘ಪೋಲೋ’) ರಿಗೆ ನೀಡಲಾಗುವ ಪ್ರಾಚೀನ ಸ್ಥಳೀಯ ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿದೆ.