Thursday, 12th December 2024

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಸೇವಾವಧಿ ವಿಸ್ತರಣೆ

ನವದೆಹಲಿ: ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಸೇವೆಯನ್ನು ಒಂದು ವರ್ಷ ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಭಲ್ಲಾ ಅವರ ಹಾಲಿ ಸೇವೆ ಮುಂದಿನ ವಾರ ಕೊನೆಯಾಗಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅವರ ಸೇವೆಯನ್ನು ಒಂದು ವರ್ಷ ವಿಸ್ತರಿಸಿದೆ. ಅಸ್ಸಾಂ-ಮೇಘಾಲಯ ಕೇಡರ್‌ನ 1984ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಭಲ್ಲಾ ಅವರು ಆಗಸ್ಟ್ 2019ರಲ್ಲಿ ಗೃಹ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.

ಸಂಪುಟ ನೇಮಕಾತಿ ಸಮಿತಿಯು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಈಗಿನ ಅವಧಿಯನ್ನು ಆ.22ರಿಂದ ಒಂದು ವರ್ಷ ವಿಸ್ತರಿಸಲು ಅನು ಮೋದನೆ ನೀಡಿದೆ” ಎಂದು ಸಿಬ್ಬಂದಿ ಸಚಿವಾಲಯದಿಂದ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅವರ ಅಧಿಕಾರಾವಧಿಯನ್ನು ಆಗಸ್ಟ್ 22, 2021 ರವರೆಗೆ ವಿಸ್ತರಿಸಲಾಗಿತ್ತು. ಈಗ ಎರಡನೇ ಬಾರಿ ಅವರ ಸೇವಾವಧಿಯನ್ನು ವಿಸ್ತರಿಸಲಾಗಿದೆ.