ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಗಳವಾರ 9 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ರಾಜಸ್ಥಾನದಿಂದ ಬಿಜೆಪಿಯ ಸಾಮೂಹಿಕ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ರಾಜಸ್ಥಾನದ ಅಜ್ಮೀರ್‌ನಲ್ಲಿ ಮೆಗಾ ರ‍್ಯಾಲಿ ಯೊಂದಿಗೆ ಪ್ರಧಾನಿ ಮೋದಿ ಪಕ್ಷದ ಒಂದು ತಿಂಗಳ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ.
ಅಜ್ಮೀರ್‌ಗೆ ತೆರಳುವ ಮುನ್ನ ಪ್ರಧಾನಿ ಪುಷ್ಕರ್‌ನ ಬ್ರಹ್ಮ ದೇವಾಲಯಕ್ಕೆ ಭೇಟಿ ನೀಡಲಿ ದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅವರ ಮಾಜಿ ಉಪ ಸಚಿನ್ ಪೈಲಟ್ ನಡುವಿನ ನಾಯಕತ್ವದ ಬಗ್ಗೆ ಬಿಕ್ಕಟ್ಟಿಗೆ ರಾಜ್ಯದಲ್ಲಿ ಕ್ಷೋಭೆ ಇದ್ದು, ಸಮಯದಲ್ಲಿ ಬಿಜೆಪಿ ತನ್ನ ಪ್ರಮುಖ ಪ್ರಚಾರವನ್ನು ಪ್ರಾರಂಭಿಸಲು ರಾಜಸ್ಥಾನವನ್ನು ಆಯ್ಕೆ ಮಾಡಿದೆ.
ವರ್ಷಾಂತ್ಯದಲ್ಲಿ ನಡೆಯಲಿರುವ ರಾಜಸ್ತಾನದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭವಿಷ್ಯಕ್ಕೆ ಅಪಾಯ ತಂದೊಡ್ಡುವ ವೈಷಮ್ಯವನ್ನು ಬಗೆಹರಿಸಲು ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಭೇಟಿಯಾಗಿದ್ದರು.
ಕಳೆದ ಒಂಬತ್ತು ವರ್ಷಗಳಲ್ಲಿ ತೆಗೆದುಕೊಂಡ ಪ್ರತಿಯೊಂದು ನಿರ್ಧಾರವೂ ಜನರ ಜೀವನವನ್ನು ಸುಧಾರಿಸುವ ಉದ್ದೇಶದಿಂದ ಕೂಡಿದೆ ಎಂದು ಪ್ರಧಾನಿ ಹೇಳಿದ್ದರು. ಮುಂದಿನ 30 ದಿನಗಳಲ್ಲಿ ಬಿಜೆಪಿಯ ಹಿರಿಯ ನಾಯಕರು ದೇಶಾದ್ಯಂತ 51 ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆ ಮಟ್ಟದಲ್ಲಿ ಒಟ್ಟು 500 ಸಾರ್ವಜನಿಕ ಸಭೆಗಳನ್ನು ನಡೆಸಲಾಗುವುದು ಎಂದು ಪಕ್ಷ ತಿಳಿಸಿದೆ.