Saturday, 23rd November 2024

ಉ.ಪ್ರದೇಶ ವಿಧಾನಸಭಾ ಚುನಾವಣೆ: ಸ್ಪರ್ಧೆಯಿಂದ ಹಿಂದೆ ಸರಿದ ಅಖಿಲೇಶ್

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ.

ಅಜಂಗಢದಿಂದ ಸಮಾಜವಾದಿ ಪಕ್ಷದ ಸಂಸದ ಹಾಗೂ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಗಿರುವ ಅಖಿಲೇಶ್ ಯಾದವ್, ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ಚುನಾವಣೆಗಾಗಿ ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕ ದಳ ನಡುವಣ ಮೈತ್ರಿ ಯನ್ನು ಅಂತಿಮಗೊಳಿಸಲಾಗಿದೆ. ಸೀಟು ಹಂಚಿಕೆ ಬಗ್ಗೆ ತೀರ್ಮಾನವಾಗಬೇಕಿದೆ ಎಂದು ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅವರು, 2022ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮತದಾರರು ನಮ್ಮ ಪಕ್ಷವನ್ನು 400 ಕ್ಷೇತ್ರಗಳಲ್ಲಿ ಗೆಲ್ಲುವಂತೆ ಮಾಡಬಹುದು. ಬಿಜೆಪಿ ಸರ್ಕಾರವನ್ನು ತೆಗೆದು ಹಾಕುವುದೇ ನಮ್ಮ ಗುರಿ,” ಎಂದು ಅಖಿಲೇಶ್ ಯಾದವ್ ಹೇಳಿದ್ದರು.

ರಾಷ್ಟ್ರವನ್ನು ಒಂದುಗೂಡಿಸಲು ಶ್ರಮಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಜಿನ್ನಾ ಜೊತೆ ಹೋಲಿಸುತ್ತಿರುವುದು ನಾಚಿಗೇಡಿನ ವಿಚಾರ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಭಾರತದ ಜನರು ವಿಭಜನೆಯನ್ನು ಸಹಿಸಿಕೊಳ್ಳುವುದಿಲ್ಲ. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಭಾರತದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಯೋಗಿ ಆದಿತ್ಯನಾಥ್ ಒತ್ತಾಯಿಸಿದ್ದಾರೆ.