Sunday, 15th December 2024

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗೆ ಐಸಿಸ್‌ ನಂಟು: ಬಂಧನ

ಲಖನೌ: ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಐವರು ಶಂಕಿತ ಉಗ್ರರನ್ನು ಬಂಧಿಸಿದ ಬೆನ್ನಲ್ಲೇ ಐಸಿಸ್‌ ಉಗ್ರರ ಜತೆ ಸಂಪರ್ಕ ಹೊಂದಿದ ಆರೋಪದಲ್ಲಿ ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿವಿಯ ವಿದ್ಯಾರ್ಥಿ ಯೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.

ಜಾರ್ಖಂಡ್‌ನ ಲೋಹರ್ದಗ ಜಿಲ್ಲೆಯಲ್ಲಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.

ಬಂಧಿತ ವಿದ್ಯಾರ್ಥಿಯನ್ನು ಫೈಜನ್‌ ಅನ್ಸಾರಿ ಎಂದು ಗುರುತಿಸಲಾಗಿದ್ದು, ಈತ ಉತ್ತರ ಪ್ರದೇಶದಲ್ಲಿರುವ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಭಾರತದಲ್ಲಿ ಐಸಿಸ್‌ ಉಗ್ರ ಚಟುವಟಿಕೆಗಳಿಗೆ ಸಂಚು ರೂಪಿಸು ತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಎನ್‌ಐಎ ಅಧಿಕಾರಿಗಳು ಜುಲೈ 16 ಹಾಗೂ 17ರಂದು ಉತ್ತರ ಪ್ರದೇಶ ಹಾಗೂ ಜಾರ್ಖಂಡ್‌ನಲ್ಲಿ ದಾಳಿ ನಡೆಸಿದ್ದು, ಶಂಕಿತರ ಮನೆ ಯಲ್ಲಿ ಪರಿಶೀಲನೆ ಮಾಡಿದ್ದಾರೆ. ತೀವ್ರ ಶೋಧದ ಬಳಿಕ ಫೈಜನ್‌ ಅನ್ಸಾರಿ ಯನ್ನು ಅಧಿಕಾರಿಗಳು ಜು.19ರಂದು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿದ್ದಾರೆ.

ಫೈಜನ್‌ ಅನ್ಸಾರಿಯು ಐಸಿಸ್‌ ಉಗ್ರರ ಜತೆ ಸಾಮಾಜಿಕ ಜಾಲತಾಣಗಳಲ್ಲಿ ನಂಟು ಹೊಂದಿದ್ದು, ಭಾರತದಲ್ಲಿ ಐಸಿಸ್‌ ಉಗ್ರ ಚಟುವಟಿಕೆಗಳ ಕುರಿತು ಚರ್ಚಿಸುತ್ತಿದ್ದ ಎಂದು ತಿಳಿದುಬಂದಿದೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಎನ್‌ಐಎ ತಿಳಿಸಿದೆ.