Thursday, 12th December 2024

ಅಲಿಗಢ ಮುಸ್ಲಿಂ ವಿವಿ ಶತಮಾನೋತ್ಸವ: ಪ್ರಧಾನಿ ಮೋದಿ ಮುಖ್ಯ ಅತಿಥಿ

ನವದೆಹಲಿ : ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಂಗಳವಾರ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ವರ್ಚುವಲ್ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅಲಿಗಢ ಮುಸ್ಲಿಂ ವಿವಿಯ ಶತಮಾನೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತ ನಾಡಲಿದ್ದು, ಮೋದಿ ಇದೇ ಮೊದಲ ಬಾರಿಗೆ ಭಾಗವಹಿಸಲಿದ್ದಾರೆ.

ಇಂದು 11 ಗಂಟೆಗೆ ಅಲಿಗಢ ಮುಸ್ಲಿಂ ವಿವಿ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಲಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಇನ್ನು ಅಲಿಗಢ ಮುಸ್ಲಿಂ ವಿವಿ ಶತಮಾನೋತ್ಸವದ ಸ್ಮರಣಾರ್ಥವಾಗಿ, ವಿಶೇಷ ಅಂಚೆ ಚೀಟಿಯನ್ನೂ ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಕೂಡ ಉಪಸ್ಥಿತರಿರುವರು.