Thursday, 12th December 2024

ಅಮರನಾಥ ಯಾತ್ರೆಯ ನೋಂದಣಿ ತಾತ್ಕಾಲಿಕ ಸ್ಥಗಿತ

ನವದೆಹಲಿ : ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ದೇವಾಲಯದ ಮಂಡಳಿಯು ಟ್ವೀಟ್ ನಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ . ಕೋವಿಡ್ 19 ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಅದನ್ನು ಮತ್ತೆ ತೆರೆಯಲಾಗುವುದು ಎಂದು ಮಂಡಳಿ ಟ್ವೀಟ್ ಮಾಡಿದೆ.

ಏ.1 ರಿಂದ ದೇಶಾದ್ಯಂತ 446 ನಿಯೋಜಿತ ಬ್ಯಾಂಕ್ ಶಾಖೆಗಳಲ್ಲಿ ಆನ್ ಲೈನ್ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿತ್ತು. ಹಿಮಾಲಯದ ಗುಹಾ ದೇವಾಲಯಕ್ಕೆ ವಾರ್ಷಿಕ 56 ದಿನಗಳ ಯಾತ್ರೆ ಜೂನ್ 28 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಮತ್ತು ಬಾಲ್ತಾಲ್ ಜೋಡಿ ಮಾರ್ಗಗಳಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 22 ರಂದು ಕೊನೆಗೊಳ್ಳಲಿದೆ.