Sunday, 15th December 2024

ನೂತನ ಕೃಷಿ ಕಾಯ್ದೆ ತಿದ್ದುಪಡಿಗೆ ಸಿದ್ದ, ಹಿಂತೆಗೆಯುವ ಪ್ರಶ್ನೆಯಿಲ್ಲ: ರಾಮದಾಸ್

ಬೆಂಗಳೂರು: ಕೃಷಿ ಸಂಬಂಧಿ ನೂತನ ಕಾಯ್ದೆಗಳ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಕಾಯ್ದೆಗಳನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ‌ ಹೇಳಿದರು.

ಭಾನುವಾರ ಮಾತನಾಡಿ, ‘ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳ ತಿದ್ದುಪಡಿಯಿಂದ ರೈತರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ತಿದ್ದುಪಡಿಗಳಿಂದ ರೈತರಿಗೆ ಅನುಕೂಲ ಆಗಲಿದೆ’ ಎಂದರು.

ಬಂಗಾಳ ಕಂಗಾಲಾಗಿದೆ. ಅಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆ ಬಳಿಕ ಪಶ್ಚಿಮ ಬಂಗಾಳದಲ್ಲಿ ಅಭಿವೃದ್ಧಿ ಶಕೆ ಆರಂಭವಾಗಲಿದೆ ಎಂದು ಹೇಳಿದರು.