Thursday, 19th September 2024

ಇನ್ನೂ ಫೈನಲ್‌ ಆಗದ ಅಮೇಠಿ, ರಾಯ್‌ ಬರೇಲಿ ಕ್ಷೇತ್ರದ ಕೈ ಅಭ್ಯರ್ಥಿ…!

ಗುವಾಹಟಿ: ಹೈವೊಲ್ಟೇಜ್‌ ಲೋಕಸಭಾ ಕ್ಷೇತ್ರಗಳಾದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಭ್ಯರ್ಥಿಗಳ ಹೆಸರನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು.

ಅಭ್ಯರ್ಥಿಗಳು ಯಾರು ಎಂದು ತಿಳಿಯಲು ನೀವು ಇನ್ನೂ ಕೆಲವು ದಿನ ಕಾಯಬೇಕು. ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದರು.

‘ಭ್ರಷ್ಟರನ್ನು ಜೈಲಿಗೆ ಹಾಕಬೇಕು ಎಂದು ಹೇಳುವ ಬಿಜೆಪಿ, ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ರಾಜ್ಯಸಭೆ ಮತ್ತು ವಿಧಾನಸಭೆಗೆ ಕಳುಹಿಸುತ್ತಿದೆ’ ಎಂದು ಹೇಳಿದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಿಂದ ಬೆಳೆದು ನಂತರ ಪಕ್ಷ ತೊರೆದ ಅವರ ಬಗ್ಗೆ ನಾವು ಮಾತನಾಡುವುದಿಲ್ಲ. ಕಾಂಗ್ರೆಸ್ ಹರಿಯುವ ನದಿಯಿದ್ದಂತೆ, ಕೆಲವರು ಪಕ್ಷ ಬಿಡುವುದರಿಂದ ಅದರ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದರು.

Leave a Reply

Your email address will not be published. Required fields are marked *