Wednesday, 11th December 2024

ಅಮೇಥಿ ಕ್ಷೇತ್ರ: ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ ಸ್ಮೃತಿ ಇರಾನಿ

ಅಮೇಥಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೋಕಸಭಾ ಚುನಾವಣೆಗೆ ಅಮೇಥಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್​ ಶೋ ನಡೆಸಿದರು. ಅಮೇಥಿ ಕ್ಷೇತ್ರದಲ್ಲಿ ಐದನೇ ಹಂತದಲ್ಲಿ ಮೇ 20ರಂದು ಚುನಾವಣೆ ನಡೆಯಲಿದೆ.
ಈ ಸ್ಥಾನಕ್ಕೆ ಇರಾನಿ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರನ್ನು ಸೋಲಿಸಿದ್ದರು.

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹಾಗೂ ಪತಿ ಜುಬಿನ್ ಇರಾನಿ ಅವರು ಹಾಜರಿದ್ದರು.

ಈ ಕ್ಷೇತ್ರಕ್ಕೆ ಕಾಂಗ್ರೆಸ್​ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಈ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಉಳಿದಿವೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾನುವಾರ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಹನುಮಾನ್​ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿ ಅಮೇಥಿ ನಿವಾಸಿಗಳ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದಾರೆ. ರಾಹುಲ್ ಅವರನ್ನು 55000 ಮತಗಳ ಅಂತರದಿಂದ ಸೋಲಿಸಿದ್ದರು.

2024ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಬಿಜೆಪಿ ಮತ್ತೊಮ್ಮೆ ಇರಾನಿ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದೆ.

ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್​ ವಾದ್ರಾ ಈ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಊಹಾಪೋಹಗಳು ಕೂಡ ಕೇಳಿಬಂದಿತ್ತು.