ಪಣಜಿ: ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದರು. ವಕೀಲರಾಗಿರುವ ಅಮಿತ್ ಪಾಲೇಕರ್ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದಾರೆ.
ಗೋವಾ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದೆ. ಫೆಬ್ರವರಿ 14ರಂದು ಚುನಾವಣೆ ನಡೆಯಲಿದ್ದು, ಮೊದಲ ಬಾರಿಗೆ ಎಎಪಿ ಪಕ್ಷ ಗೋವಾ ಚುನಾವಣಾ ಕಣಕ್ಕಿಳಿಯುತ್ತಿದೆ.
5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ಎಎಪಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದೆ. ಮಂಗಳವಾರ ಪಂಜಾಬ್ ರಾಜ್ಯದ ಸಿಎಂ ಅಭ್ಯರ್ಥಿ ಘೋಷಣೆ ಮಾಡಲಾಗಿತ್ತು. ಅರವಿಂದ ಕೇಜ್ರಿವಾಲ್, “ಪಕ್ಷ ಗೋವಾ ರಾಜ್ಯದ ಎಲ್ಲಾ 40 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡಲಿದೆ” ಎಂದರು.
ಆಮ್ ಆದ್ಮಿ ಪಕ್ಷ ಮೊದಲ ಬಾರಿಗೆ ಗೋವಾ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಈಗಾಗಲೇ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಯಾವುದೇ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳದೇ ರಾಜ್ಯದ 40 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿ ಗಳನ್ನು ಕಣಕ್ಕಿಳಿಸುತ್ತಿದೆ.
ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷಗಳು ಸಹ ಇನ್ನೂ ಸಹ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಆದರೆ ಎಎಪಿ ಎಲ್ಲಾ ಪಕ್ಷಗಳಿಗಿಂತ ಮೊದಲು ಸಿಎಂ ಅಭ್ಯರ್ಥಿ ಘೋಷಣೆ ಮಾಡಿದ ಅಚ್ಚರಿ ಮೂಡಿಸಿದೆ.
ಅರವಿಂದ ಕೇಜ್ರಿವಾಲ್ ಗೋವಾದ ಅಭಿವೃದ್ಧಿಗಾಗಿ 13 ಅಂಶಗಳ ಕಾರ್ಯಕ್ರಮ ಘೋಷಣೆ ಮಾಡಿದ್ದರು.
ಯುವಕರಿಗೆ ಉದ್ಯೋಗ ನೀಡುವುದು, ಉದ್ಯೋಗ ಸಿಗದ ಯುವಕರಿಗೆ ಮಾಸಿಕ 3 ಸಾವಿರ ರೂ. ನೀಡುವುದು. ಎಎಪಿ ಅಧಿಕಾರಕ್ಕೆ ಬಂದ 6 ತಿಂಗಳಿನಲ್ಲಿ ಗಣಿಗಾರಿಕೆಗೆ ಭೂಮಿ ಹಂಚಿಕೆ, 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೆ ಮಾಸಿಕ 100 ರೂ. ನೀಡಿದೆ. 24*7 ವಿದ್ಯುತ್, ನೀರು ನೀಡುವ ಘೋಷಣೆಗಳನ್ನು ಮಾಡಿದ್ದರು. ಎಎಪಿ ಜೊತೆಗೆ ಟಿಎಂಸಿ ಸಹ ಇದೇ ಮೊದಲ ಬಾರಿಗೆ ಗೋವಾ ಚುನಾವಣಾ ಕಣಕ್ಕೆ ಧುಮುಕುತ್ತಿದೆ.