Friday, 13th December 2024

ಜ.30 ರಂದು ಗೋವಾಕ್ಕೆ ಅಮಿತ್ ಶಾ ಆಗಮನ

ಪಣಜಿ: ಗೋವಾ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲು ಬಿಜೆಪಿ ರಾಷ್ಟ್ರೀಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.30 ರಂದು ಗೋವಾಕ್ಕೆ ಆಗಮಿಸಲಿದ್ದಾರೆ.

ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರೊಂದಿಗೆ ಚುನಾವಣಾ ಪೂರ್ವ ಸಿದ್ಧತೆ ಕುರಿತು ಚರ್ಚೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಗೋವಾ ಭೇಟಿಯಿಂದ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ಬಿಜೆಪಿ ಗೋವಾ ಉಸ್ತುವಾರಿ ಸಿ.ಟಿ ರವಿ ಅಭಿಪ್ರಾಯ ಪಟ್ಟಿದ್ದಾರೆ.

ಚುನಾವಣಾ ಆಯೋಗ ಹೊರಡಿಸಿರುವ ಎಲ್ಲ ನಿಯಮಗಳಿಗೆ ಬದ್ಧವಾಗಿ ಜ.28 ರಿಂದ ಪ್ರಧಾನಿ ಮೋದಿ,ಶಾ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಪಕ್ಷದ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಾನಾವಡೆ ಮಾಹಿತಿ ನೀಡಿದರು.

ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸ್ಮೃತಿ ಇರಾನಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ಗೋವಾ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್, ಸಹ ಉಸ್ತುವಾರಿ ಕಿಶನ್ ರೆಡ್ಡಿ, ರವರು ರಾಜ್ಯದಲ್ಲಿ ಪಕ್ಷದ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಮಾಹಿತಿ ನೀಡಿದರು.