Friday, 22nd November 2024

59ನೇ ಹುಟ್ಟುಹಬ್ಬ ಆಚರಿಸಿಕೊಂಡ ಗೃಹ ಸಚಿವ ಅಮಿತ್ ಶಾ

ವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 59ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದರು.

ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿಗೆ ಅವರು ನೀಡಿದ ಕೊಡುಗೆಗಳನ್ನು ಮೋದಿ ಶ್ಲಾಘಿಸಿದ್ದಾರೆ.

ಅವರು ಅತ್ಯುತ್ತಮ ಆಡಳಿತಗಾರರಾಗಿ ಛಾಪು ಮೂಡಿಸಿದ್ದಾರೆ. ಭಾರತದ ಭದ್ರತಾ ಸಾಮರ್ಥ್ಯವನ್ನು ಹೆಚ್ಚಿಸಲು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಸಹಕಾರಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ’ ಎಂದು ಮೋದಿ ಹೇಳಿದ್ದಾರೆ.

ಬಿಜೆಪಿಯನ್ನು ಬಲಪಡಿಸುವಲ್ಲಿ ಶಾ ಅವರ ಪಾತ್ರ ಶ್ಲಾಘನೀಯ ಎಂದ ಅವರು, ಅಮಿತ್ ಶಾ ಅವರಿಗೆ ದೇವರು ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯವನ್ನು ನೀಡಲಿ ಎಂದು ಹಾರೈಸಿದ್ದಾರೆ.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಬಿಜೆಪಿಯ ಇತರ ಪ್ರಮುಖ ನಾಯಕರು ಸಹ ಶಾ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ರಾಷ್ಟ್ರಕ್ಕೆ ಅಮಿತ್ ಶಾ ಅವರ ಅಸಾಧಾರಣ ಸಮರ್ಪಣೆ, ಪ್ರಾಮಾಣಿಕತೆ ಮತ್ತು ಸಂಘಟನಾ ಕೌಶಲ್ಯವನ್ನು ಶ್ಲಾಘಿಸಿದ್ದಾರೆ. ಇದು ಪಕ್ಷದ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ ಎಂದು ಹೇಳಿದ್ದಾರೆ.