Wednesday, 11th December 2024

ಕೇಂದ್ರ ಸಚಿವ ಅಮಿತ್‌ ಶಾಗೆ 2 ಲಕ್ಷ ಮತಗಳ ಮುನ್ನಡೆ

ವದೆಹಲಿ: ಗಾಂಧಿ ನಗರ ಕ್ಷೇತ್ರದಿಂದ ಸ್ಪರ್ಧಿಸಿರುವ ಹಾಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ದಾಖಲೆಯ 2 ಲಕ್ಷ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಮೂಲಕ ಶಾ ಅವರ ಗೆಲುವು ಬಹುತೇಕ ಖಚಿತವಾಗಿದೆ.

ಗುಜರಾತ್‌ನ 26 ಲೋಕಸಭಾ ಕ್ಷೇತ್ರಗಳಲ್ಲಿ ಗಾಂಧಿನಗರ ಪ್ರಮುಖ ಸ್ಥಾನವಾಗಿದೆ. ಈ ಕ್ಷೇತ್ರಕ್ಕೆ ಬಿಜೆಪಿಯಿಂದ ಅಮಿತ್‌ ಶಾ ಹಾಗೂ ಕಾಂಗ್ರೆಸ್‌ನಿಂದ ಸೋನಾಲ್ ಪಟೇಲ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

10 ಗಂಟೆ ವೇಳೆಗೆ ಅಮಿತ್‌ ಶಾ ಅವರು ಗಾಂಧಿನಗರ ಕ್ಷೇತ್ರದಲ್ಲಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನ ಎಲ್ಲಾ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ಗುಜರಾತ್‌ನ 26 ಕ್ಷೇತ್ರಗಳ ಪೈಕಿ 25 ರಲ್ಲಿ ಬಿಜೆಪಿ ಹಾಗೂ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ.